ತುಂಬೆ: ಹೆದ್ದಾರಿಯಲ್ಲಿ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್
Update: 2024-05-31 10:45 IST
ಬಂಟ್ವಾಳ, ಮೇ 31: ಗ್ಯಾಸ್ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಕಡೆಗೋಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಮೇಲೆ ಉರುಳಿಬಿದ್ದಿದೆ. ಈ ವೇಳೆ ಯಾವುದೇ ಅನಿಲ ಸೋರಿಕೆ ಆಗಿಲ್ಲ ಎಂದು ತಿಳಿದುಬಂದಿದೆ.
ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.