ಮುಂದಿನ 3 ಗಂಟೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ
Update: 2023-11-25 19:27 IST
ಫೈಲ್ ಫೋಟೊ
ಮಂಗಳೂರು, ನ.25: ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ಉತ್ತರ ಕನ್ನಡದ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ ಬೆಂಗಳೂರು) ಶನಿವಾರ ರಾತ್ರಿ 7 ಗಂಟೆಗೆ ಹೊರಡಿಸಿದ ಪ್ರಕಟನೆಯಲ್ಲಿ ತಿಳಿಸಿದೆ.
ದ.ಕ. ಜಿಲ್ಲೆಯ ಮಂಗಳೂರು ಸೇರಿದಂತೆ ಅಲ್ಲಲ್ಲಿ ಶನಿವಾರ ರಾತ್ರಿ 7 ಗಂಟೆಯ ಹೊತ್ತಿಗೆ ತುಂತುರು ಮಳೆಯಾಗಿದೆ.