ಹುಲಿ ಕುಣಿತಗಾರ "ಪಿಲಿ ರಾಧಣ್ಣ" ನಿಧನ
Update: 2025-09-06 13:36 IST
ಪುತ್ತೂರು: ಪುತ್ತೂರಿನಲ್ಲಿ ಹುಲಿ ಕುಣಿತ ಪರಂಪರೆಗೆ ತನ್ನದೇ ಆದ ಕೊಡುಗೆ ನೀಡಿದ್ದ, ಪಿಲಿ ರಾಧಣ್ಣ ಎಂದೇ ಪರಿಚಿತರಾಗಿದ್ದ ಪುತ್ತೂರು ತಾಲೂಕಿನ ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಬೆಳಗ್ಗೆ ನಿಧನರಾದರು.
ಪಿಲಿ ರಾಧಣ್ಣ ಅವರು ಸೆ.5ರಂದು ಅನಾರೋಗ್ಯಕ್ಕೆ ಒಳಗಾಗಿದ್ದು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.