×
Ad

ತುಂಬೆ: ಡ್ರಗ್ಸ್ ಮುಕ್ತ ಗ್ರಾಮ ಅಧ್ಯಯನ ಕಾರ್ಯಕ್ರಮ

Update: 2023-08-26 22:32 IST

ಬಂಟ್ವಾಳ : ಫರಂಗಿಪೇಟೆ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರಿನ ರೋಶನಿ ನಿಲಯ ಕಾಲೇಜು, ಇದರ ಆಶ್ರಯದಲ್ಲಿ ಡ್ರಗ್ಸ್ ಮುಕ್ತ ಗ್ರಾಮ ಅಧ್ಯಯನ ಕಾರ್ಯಕ್ರಮವು ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು.

ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಅಧ್ಯಕ್ಷತೆ ವಹಿಸಿದ್ದರು.

ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಬ್ಬಾರ್ ಮಾರಿಪಳ್ಳ ಹಾಗೂ ರೋಶನಿ ನಿಲಯ ಕಾಲೇಜಿನ ಉಪನ್ಯಾಸಕಿ ವನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ವೇಳೆ ರೋಶನಿ ನಿಲಯದ ವಿದ್ಯಾರ್ಥಿಗಳಿಂದ ಡ್ರಗ್ಸ್ ಮುಕ್ತ ಅಭಿಯಾನದ ಕಿರು ನಾಟಕ ಪ್ರದರ್ಶನಗೊಂಡಿತು.

ಅಬ್ದುಲ್ ಸಲಾಂ ಸ್ವಾಗತಿಸಿ, ಸಾಯಿರಾಮ್ ನಾಯಕ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News