×
Ad

ಉಳ್ಳಾಲ | ರಸ್ತೆ ಅಪಘಾತ: ಸ್ಕೂಟರ್ ಸವಾರ ಬಲಿ.

Update: 2025-08-13 11:40 IST

ಸಾಂದರ್ಭಿಕ ಚಿತ್ರ 

ಉಳ್ಳಾಲ: ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆಯಲ್ಲಿ ನಡೆದಿದೆ.

ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44) ಯಾನೆ ರಘು ಮೃತಪಟ್ಟವರು.

ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಇದರಿಂದ ರಾಘವೇಂದ್ರ ಅವರ ತಲೆ ರಸ್ತೆ ಬದಿಯ ಆವರಣ ಗೋಡೆಗೆ ಬಡಿದು ಗಂಭೀರವಾಗಿ ಗಾಯಗೊಂಡರು. ಈ ವೇಳೆ ಸ್ಥಳೀಯ ಯುವಕರು ತಕ್ಷಣ ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಮೃತ ರಾಘವೇಂದ್ರ ಅವರು ತಾಯಿ, ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News