ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ಸಮಗ್ರ ತನಿಖೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಬಿಜೆಪಿ ಧರಣಿ
Update: 2023-07-31 12:22 IST
ಮಂಗಳೂರು, ಜು.31: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ವೀಡಿಯೊ ಚಿತ್ರೀಕರಣಕ್ಕೆ ವಿವಾದದ ಬಗ್ಗೆ ವಿಶೇಷ ತಂಡ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ನಗರದ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ಧರಣಿ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮೊದಲಾದವರು ಭಾಗಿಯಾಗಿದ್ದಾರೆ.