ಉಜಿರೆ: 8ನೇ ತರಗತಿಯ ಬಾಲಕ ಆತ್ಮಹತ್ಯೆ
Update: 2024-01-04 19:11 IST
ಉಜಿರೆ: ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದ ಬಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಸಂಭವಿಸಿದೆ.
ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಹಾಗೂ ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ತನ್ನ ತಾಯಿಯ ಸೀರೆಯಿಂದ ಮನೆಯ ಒಳಗಿನ ಬಿದಿರಿನ ಅಡ್ಡಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.