×
Ad

ಉಳ್ಳಾಲ: ಫೆ.1ರಿಂದ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ

Update: 2026-01-28 14:21 IST

ಉಳ್ಳಾಲ : ಕಾಪಿಕಾಡು ಉಮಾಪುರಿಯ ಶ್ರೀ ,ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಫೆ. 1ರಿಂದ ಫೆ. 6ರವರೆಗೆ ನಡೆಯಲಿದ್ದು, ಫೆ. 7 ಮತ್ತು 8 ರಂದು ವಾರ್ಷಿಕ ಮಹೋತ್ಸವ ನಡೆಯಲಿದೆ.

ಶ್ರೀ ಉಮಾಮಹೇಶ್ವರೀ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಕುಂಪಲ ಮಾಹಿತಿ ನೀಡಿ , ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮತ್ತು ಭದ್ರಕಾಳಿ ಪ್ರತಿಷ್ಠೆ ನಡೆಯಲಿದ್ದು, ಫೆ. 1ರಂದು ಸಂಜೆ 6.00 ಗಂಟೆಯಿಂದ ವೈಧಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಫೆ. 2ರಿಂದ ಫೆ 6 ರ ವರೆಗೆ ಮಹಾಪೂಜೆ,ಸಭಾ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಫೆ 7 ಮತ್ತು 8ರಂದು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಬೆಳಗ್ಗೆ 9.00ರಿಂದ ಗಣಪತಿ ಹೋಮ, ನವಕ ಕಲಶಾಭಿಷೇಕ ಮಧ್ಯಾಹ್ನ 12.30ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1.00ರಿಂದ ಮಹಾ ಅನ್ನ ಸಂತರ್ಪಣೆ, ರಾತ್ರಿ 7.00ರಿಂದ ಸಾಮೂಹಿಕ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ 8.00ರಿಂದ ಶ್ರೀ ಭೂತ ಬಲಿ ಉತ್ಸವ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜೆ. ಶೇಖರ್, ಆಡಳಿತ ಮಂಡಳಿ ಪ್ರ. ಕಾರ್ಯದರ್ಶಿ ದಿನೇಶ್ ಕೆ. ಅತ್ತಾವರ, ಸೇವಾ ಸಮಿತಿ ಅಧ್ಯಕ್ಷ ದಿನೇಶ್ ರೈ ಕಳ್ಳಿಗೆ, ಪ್ರ. ಕಾರ್ಯದರ್ಶಿ ಗಣೇಶ್ ಕಾಪಿಕಾಡು, ಬ್ರಹ್ಮಕಲಶೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡು , ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ ತೊಕ್ಕೊಟ್ಟು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News