ಉಳ್ಳಾಲ| ಹೊಟೇಲ್ ಕಾರ್ಮಿಕನಿಗೆ ಹಲ್ಲೆ ಪ್ರಕರಣ: ನಾಲ್ಕು ಮಂದಿ ಆರೋಪಿಗಳ ಬಂಧನ
Update: 2025-05-05 19:29 IST
ಉಳ್ಳಾಲ : ಕುಂಪಲ ಬಗಂಬಿಲ ಬಳಿ ಶನಿವಾರ ರಾತ್ರಿ ಹೊಟೇಲ್ ಕಾರ್ಮಿಕನೋರ್ವನ ಮೇಲೆ ತಂಡವೊಂದು ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆದಿತ್ಯ, ಕುಷಿತ್, ಮೈಕಲ್, ಸಚಿನ್ ಎಂದು ಗುರುತಿಸಲಾಗಿದೆ.
ಇವರು ಬಗಂಬಿಲ ಬಳಿ ಹೊಟೇಲ್ ಕಾರ್ಮಿಕ ಅಝೀಝ್ ಎಂಬವರಿಗೆ ಹಲ್ಲೆಗೈದಿದ್ದರು ಎನ್ನಲಾಗಿದೆ. ಈ ಬಗ್ಗೆ ಅಝೀಝ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.