×
Ad

ಉಳ್ಳಾಲ: ಮರಳು ಅಕ್ರಮ ದಾಸ್ತಾನು, ಸಾಗಾಟ ಪತ್ತೆ

Update: 2023-08-24 11:46 IST

ಮಂಗಳೂರು, ಆ.24: ಅಕ್ರಮವಾಗಿ ಮರಳು ದಾಸ್ತಾನು ಹಾಗೂ ಸಾಗಾಟ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ಉಳ್ಳಾಲ ಠಾಣಾ ಪೊಲೀಸರು ಇಂದು ಮುಂಜಾವ ಪತ್ತೆಹಚ್ಚಿದ್ದಾರೆ.

ಖಚಿತ ಮಾಹಿತಿಯನ್ನು ಆಧರಿಸಿ ಇಂದು ಮುಂಜಾನೆ 4:10ರ ಸುಮಾರಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪೆರ್ಮನ್ನೂರು ಗ್ರಾಮದ ಕಲ್ಲಾಪು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದನ್ನು ವಶಕ್ಕೆ ಪಡೆದಿದ್ದಾರೆ.

ಅದೇರೀತಿ ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ನೇತ್ರಾವತಿ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 12 ಲೋಡ್ ಮರಳನ್ನು ಪತ್ತೆ ಹಚ್ಚಿದ್ದಾರೆ. ಈ ಬಗ್ಗೆ ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭು ವಿಜ್ಞಾನ ಇಲಾಖೆಗೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News