ಕೇಂದ್ರ ಬಜೆಟ್ ನಿರಾಶದಾಯಕವಾಗಿದೆ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಕೇಂದ್ರ ಬಜೆಟ್ ನಿರಾಶದಾಯಕವಾಗಿದೆ. ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಹರಿಸಿಲ್ಲ. ವೇದ್ಯಕೀಯ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಠಿಯಿಂದ ದೇಶದಲ್ಲಿ ಐದು ಪ್ರಾದೇಶಿಕ ವೈದ್ಯಕೀಯ ಹಬ್ ಮತ್ತು ಆಯುರ್ವೇದ ಕೇತ್ರದ ಅಭಿವೃದ್ಧಿಗೆ ಮೂರು ಆಯುರ್ವೇದ ವಿಶ್ವವಿದ್ಯಾನಿಲಯಗಳನ್ನು ಪ್ರಾರಂಭಿಸಲಾಗುವುದು ಘೋಷಿಸಿದೆ. ಆದರೆ ಅದು ಎಲ್ಲಿ ಎಂದು ಸ್ಪಷ್ಟಪಡಿಸಿಲ್ಲ. ಈ ಪೈಕಿ ಒಂದು ವೈದ್ಯಕೀಯ ಹಬ್ ಮತ್ತು ಒಂದು ಆಯುರ್ವೇದ ವಿವಿಯನ್ನು ಕೇಂದ್ರ ಸರಕಾರವು ಕರ್ನಾಟಕಕ್ಕೆ ನೀಡಲಿ ಎಂದು ಆಗ್ರಹಿಸುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೇಂದ್ರ ಸರಕಾರ ಕೇವಲ ಗುಜರಾತ್‌ನ ಅಭಿವೃದ್ಧಿ ಕಡೆಗೆ ಗಮನ ನೀಡಿದರೆ ಸಾಲದು. ಬೇರೆ ರಾಜ್ಯಗಳ ಕಡೆಗೂ ಗಮನ ಹರಿಸಿದರೆ ಉತ್ತಮ. ಬೆಂಗಳೂರು-ಮಂಗಳೂರು ನಡುವೆ ಮೂರು ವಂದೇ ಭಾರತ್ ರೈಲು ಪ್ರಾರಂಭಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಒಂದು ರೈಲನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿಲ್ಲ. ರಬ್ಬರ್ ಬೆಳೆಯನ್ನು ಕೃಷಿ ಉತ್ಪನ್ನವಾಗಿ ಪರಿಗಣಿಸುವಂತೆ ಕೇಂದ್ರಕ್ಕೆ ಆಗ್ರಹಿಸಲಾಗಿತ್ತು. ಆದರೆ ಅದನ್ನು ಪರಿಗಣಿಸಲಾಗಿಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.