×
Ad

ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ಬಲಿಷ್ಠಗೊಳ್ಳಬೇಕು: ಸೀತಾರಾಮ ರೈ ಸವಣೂರು

Update: 2023-10-16 18:51 IST

ಮಂಗಳೂರು, ಅ.16: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳು ಬಹಳಷ್ಟು ಸವಾಲು ಎದುರಿಸು ತ್ತಿದೆ. ಈ ನಿಟ್ಟಿನಲ್ಲಿ ಆಡಳಿತ ಮಂಡಳಿಯು ಒಕ್ಕೂಟವನ್ನು ಬಲಿಷ್ಠಗೊಳಿಸಬೇಕುದೆ ಎಂದು ದ.ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಹೇಳಿದರು.

ನಗರದ ಬಲ್ಮಠದಲ್ಲಿರುವ ಹೊಟೇಲ್ ಕ್ವಾಲಿಟಿಯ ಕುಡ್ಲ ಪೆವಿಲಿಯನ್‌ನಲ್ಲಿ ಸೋಮವಾರ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಜಾರಿಯಾಗುತ್ತಿರುವ ವಿವಿಧ ವ್ಯವಸ್ಥೆ, ಕಾನೂನುಗಳಿಂದಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಬಹಳಷ್ಟು ಸಮಸ್ಯೆಗಳನ್ನು ಹೊಂದಿದ್ದರೂ ಅದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಒಕ್ಕೂಟ ಸ್ಪಂದಿಸುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲೂ ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕಿದೆ. ಆ ಮೂಲಕ ಒಕ್ಕೂಟವನ್ನು ಬಲಿಷ್ಠಗೊಳಿಸುವ ಅನಿವಾರ್ಯತೆ ಎದುರಾಗಿದೆ. ಹಾಗಾಘಿ ಎಲ್ಲಾ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಸಹಕರಿಸಬೇಕಿದೆ ಎಂದರು.

ಜೋಕಟ್ಟೆ ಅಂಜುಮಾನ್ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ಮೂಸಬ್ಬ ಬಿ. ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಾಂದೀಪನಿ ವಿದ್ಯಾಮಂದಿರದ ಸಂಚಾಲಕ ಎಚ್. ಭಾಸ್ಕರ ಆಚಾರ್ ಉಪಸ್ಥಿತರಿದ್ದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಜಯಸೂರ್ಯ ರೈ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News