ಯುನಿವೆಫ್ | ಬಿ.ಸಿ. ರೋಡ್ ನಲ್ಲಿ ಸೀರತ್ ಸಮಾವೇಶ
Update: 2025-12-04 10:26 IST
ಮಂಗಳೂರು: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ 20 ನೇ ವರ್ಷದ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಅಭಿಯಾನದ ಸೀರತ್ ಸಮಾವೇಶವು ಡಿ.5 ರ ಶುಕ್ರವಾರ ಸಂಜೆ 6.45 ಕ್ಕೆ ಬಿ.ಸಿ. ರೋಡ್ ನ ಪೂಂಜಾ ಗ್ರೌಂಡ್ ನಲ್ಲಿ ಜರಗಲಿರುವುದು.
ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅವರು “ಶೋಷಣೆಯ ವಿರುದ್ಧ ಪ್ರವಾದಿ (ಸ) ಯ ನಡೆ” ಎಂಬ ವಿಷಯದಲ್ಲಿ ಪ್ರಮುಖ ಭಾಷಣ ಮಾಡಲಿರುವರು.
ಜಮೀಅತುಲ್ ಫಲಾಹ್ ಬಂಟ್ವಾಳ ತಾಲೂಕು ಇದರ ಅಧ್ಯಕ್ಷ ಬಿ. ಎಂ. ಅಬ್ಬಾಸ್ ಅಲಿ ಮತ್ತು ಅನಿವಾಸಿ ಉದ್ಯಮಿ ಅಬ್ದುರ್‍ರಹೀಮ್ ಖತರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಹಿಳೆಯರಿಗೆ ಪ್ರತ್ರ್ಯೇಕ ಸ್ಥಳಾವಕಾಶ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.