×
Ad

ರೈಲಿನಡಿಗೆ ಬಿದ್ದು ಅವಿವಾಹಿತ ಆತ್ಮಹತ್ಯೆ

Update: 2023-09-25 18:35 IST

ಉಳ್ಳಾಲ: ರೈಲಿನಡಿಗೆ ಬಿದ್ದು ಅವಿವಾಹಿತನೋರ್ವ ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ರೈಲ್ವೇ ಗೇಟ್ ಬಳಿ ರವಿವಾರ ರಾತ್ರಿ ನಡೆದಿದೆ.

ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆಗೈದ ಯುವಕ. ರವಿವಾರ ಸಂಜೆ ಮನೆಯಿಂದ ಹೊರಟ ಪ್ರಶಾಂತ್ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರಲ್ಲಿ ಬಂದ ಪ್ರಶಾಂತ್ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ಹಳಿಯಲ್ಲಿ ನಡೆದು ಹೋಗಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಿವಾಹಿತರಾಗಿದ್ದ ಪ್ರಶಾಂತ್ ಪಾನ ಮತ್ತರಾಗಿ ಕೃತ್ಯವನ್ನು ಎಸಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ ಐ ಮಧುಚಂದ್ರ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News