×
Ad

ಉಪ್ಪಿನಂಗಡಿ| ಆಂಬ್ಯುಲೆನ್ಸ್ - ಈಚರ್ ಲಾರಿ ಢಿಕ್ಕಿ: ಓರ್ವನಿಗೆ ಗಾಯ

Update: 2024-10-12 20:13 IST

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್ ಚಾಲಕ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಎಂಬಲ್ಲಿ ಶನಿವಾರ ನಡೆದಿದೆ.

ಆಂಬ್ಯುಲೆನ್ಸ್ ಚಾಲಕ ಮುಸ್ತಾಫ ಎಂಬವರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇದರಿಂದ ಎರಡೂ ವಾಹನಗಳು ಜಖಂಗೊಂಡಿವೆ. ಅಪಘಾತ ಸಂದರ್ಭ ಕೆಲ ಕಾಲ ಹೆದ್ದಾರಿ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News