×
Ad

ಉಪ್ಪಿನಂಗಡಿ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

Update: 2025-07-22 20:34 IST

ಉಪ್ಪಿನಂಗಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಸಮೀಪದ ಎಡ್ತಿಲ್ಲ ಎಂಬಲ್ಲಿ ಮಂಗಳವಾರ ನಡೆದಿದೆ.

ನೆಲ್ಯಾಡಿ ಸಮೀಪದ ಬರೆಗುಡ್ಡೆ ನಿವಾಸಿ ವಿಜೇಶ್ ಎ. (43) ಮೃತ ವ್ಯಕ್ತಿ. ಪ್ರತಿ ದಿನದಂತೆ ಮಂಗಳವಾರ  ಬೆಳಗ್ಗೆ ಎಡ್ತಿಲ್ಲ ಮಣ್ಣಗುಂಡಿ ಬಳಿಯ ತಮ್ಮ ತೋಟಕ್ಕೆ ತೆರಳಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುವ ವೇಳೆ ಆಕಸ್ಮಿಕವಾಗಿ ಇವರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮೃತರು, ತಾಯಿ , ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News