×
Ad

ಉಪ್ಪಿನಂಗಡಿ: ವಿದ್ಯುತ್ ಆಘಾತಕ್ಕೆ ವ್ಯಕ್ತಿ ಬಲಿ

Update: 2024-10-04 22:15 IST

ಉಪ್ಪಿನಂಗಡಿ: ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ.

ಇಲ್ಲಿನ ನಿವಾಸಿ ಬಾಬು (52) ಮೃತಪಟ್ಟವರು. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರು 2 ಹೆಣ್ಣು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News