ಉಪ್ಪಿನಂಗಡಿ: ಸರ ಕಳ್ಳತನ ಪ್ರಕರಣ; ಆರೋಪಿ ಬಂಧನ
Update: 2025-08-19 20:51 IST
ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಪಡುವೆಟ್ಟು ಎಂಬಲ್ಲಿ 2025ರ ಜೂನ್ 4ರಂದು ಮನೆಯ ಗೇಟು ಮುಂಭಾಗದಲ್ಲಿ ನಿಂತಿದ್ದ ಮಹಿಳೆಯೋರ್ವರ ಕತ್ತಿನಿಂದ 6 ಪವನ್ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದಿದ್ದ ಇಬ್ಬರು ಆಗಂತುಕರು ಎಳೆದು ಪರಾರಿ ಆಗಿರುವ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತ ಆರೋಪಿ ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನಾಗಿರುತ್ತಾರೆ. ಆರೋಪಿಯಿಂದ 4,54,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್‍ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೈಕ್ ಬಗ್ಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ತೆ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಎಸ್. ರವಿ ನೇತೃತ್ವದ ಉಪ್ಪಿನಂಗಡಿ ಪೊಲೀಸರು ಭಾಗವಹಿಸಿದ್ದರು.