×
Ad

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ, ಮಾರಾಟ ಪ್ರಕರಣ; ಆರೋಪಿಗಳಿಗೆ ಶಿಕ್ಷೆ

Update: 2025-11-20 14:06 IST

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಪಿಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಬೆಳ್ತಂಗಡಿ ವಿಚಾರಣೆ ನಡೆಸಿ ಆರೋಪಿಗಳಿಗೆ ದಂಡ ಹಾಗೂ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.

ಆರೋಪಿಗಳನ್ನು ಸಲೀಂ ಹುಸೇನ್, ಶಹಜ್ ಅಹಮದ್, ಮಹಮದ್ ಶಾಫಿ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:120/2023 ಕಲಂ 27(B)&20(b)(ii)(A) NDPS ACT ಪ್ರಕರಣದ ಬಗ್ಗೆ  ತನಿಖೆ ನಡೆಸಿದ ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ರವರು, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಪ್ರಕರಣದ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಈ ಬಗ್ಗೆ  ಪಿಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಬೆಳ್ತಂಗಡಿ ವಿಚಾರಣೆ ನಡೆಸಿ, ಆರೋಪಿಗಳ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕಲಂ 27(B) ಅಡಿಯಲ್ಲಿ 10000 ರೂ. ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ, ಕಲಂ 20(B)(ii)(A) ಅಡಿಯಲ್ಲಿ 10000 ರೂ. ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿರುತ್ತದೆ.

ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕರಾದ ದಿವ್ಯರಾಜ ಹೆಗ್ಡೆ ಅವರು ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News