×
Ad

ವೀರಕಂಬ ಗ್ರಾ.ಪಂ: ಅಧ್ಯಕ್ಷರಾಗಿ ಲಲಿತಾ, ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ

Update: 2023-08-10 21:21 IST

ಲಲಿತಾ - ಜನಾರ್ಧನ ಪೂಜಾರಿ

ವಿಟ್ಲ: ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ನೂತನ ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆಯಾಗಿದ್ದಾರೆ.

ವೀರಕಂಭ ಗ್ರಾಮ ಪಂಚಾಯತ್ ಒಟ್ಟು 14 ಸದಸ್ಯರನ್ನು ಹೊಂದಿದ್ದು ಈ ಪೈಕಿ 7ಮಂದಿ ಕಾಂಗ್ರೆಸ್ ಬೆಂಬಲಿತ 7ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸದಸ್ಯರಾಗಿದ್ದು ಎರಡು ಪಕ್ಷಗಳು ಸಮಬಲ ಹೊಂದಿದ್ದು ಆಯ್ಕೆ ಬಹಳ ಕುತೂಹಲಕಾರಿ ಆಗಿ ಪರಿಣಮಿಸಿತ್ತು.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಜಯಂತಿ ಮತ್ತು ಲಲಿತಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಂದೀಪ್ ಪೂಜಾರಿ ಮತ್ತು ಜನಾರ್ಧನ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಮತದಾನ ನಡೆದು ಎಲ್ಲಾ ಅಭ್ಯರ್ಥಿಗಳು ಸಮಾನ ಮತಗಳನ್ನು ಪಡೆದಿದ್ದರಿಂದ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು.

ಜಿ.ಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಜಿ.ಕೆ.ನಾಯ್ಕ್ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News