×
Ad

ವಿಟ್ಲ | ಮೂರ್ಕಜೆಯ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ರವಿವಾರದಿಂದ ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ

Update: 2026-02-23 14:43 IST

ವಿಟ್ಲ: ಕೊಡಂಗಾಯಿ ಬಳಿಯ ಮೂರ್ಕಜೆ ಎಂಬಲ್ಲಿರುವ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಸೋಮವಾರ ನಡೆದಿದೆ.

10ನೇ ತರಗತಿಯ ವಿದ್ಯಾರ್ಥಿನಿ ಬೆಂಗಳೂರು ಮೂಲದ ವೈಗ ಲಕ್ಷ್ಮೀ ಮೃತಪಟ್ಟರು.

ವೈಗ ಲಕ್ಷ್ಮೀ ರವಿವಾರ(ಫೆ.22)ದಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಇಂದು ಗುರುಕುಲದ ಕೆರೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಮೇಲಕ್ಕೆತ್ತಿ, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News