ವಿಟ್ಲ | ಕನ್ಯಾನದ ಮಂಡ್ಯೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಸ್ಥಳೀಯರಲ್ಲಿ ಆತಂಕ
Update: 2025-06-16 15:44 IST
ವಿಟ್ಲ: ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಜನರಿಗೆ ಒಂದು ಕ್ಷಣ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಕಂಪನದ ಅನುಭವ ಕೇವಲ ಒಂದೆರಡು ಸೆಕೆಂಡುಗಳು ಮಾತ್ರ ಉಂಟಾಗಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ. ಈ ಬಗ್ಗೆ ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಯಬಿಟ್ಟಿದ್ದಾರೆ., ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಿದ್ದಾರೆ.
ಕೆಲವು ತಿಂಗಳ ಹಿಂದೆ ವಿಟ್ಲದಲ್ಲಿ ಕೆಲವರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿತ್ತು. ಪರಿಶೀಲಿಸಿದಾಗ ಮಾಡತ್ತಡ್ಕ ಎಂಬಲ್ಲಿರುವ ಕಲ್ಲಿನ ಕೋರೆಯಲ್ಲಿ ಸ್ಫೋಟಕ ದಾಸ್ತಾನು ಇರಿಸಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು ಕಂಪನಕ್ಕೆ ಕಾರಣ ಎಂಬುದು ಪತ್ತೆಯಾಗಿತ್ತು. ಇದು ಕೂಡಾ ಅದೇ ರೀತಿಯ ಘಟನೆ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.