×
Ad

ವಿಟ್ಲ | ಅಪಘಾತ ತಪ್ಪಿಸಲೆತ್ನಿಸಿ ಎರಡು ಬೈಕ್ ಗಳಿಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು

Update: 2024-11-12 11:47 IST

ವಿಟ್ಲ: ಬೈಕಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ್ ಎಂಬವರು ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ.

ಸನನ್ ಇಂದು ಬೆಳಗ್ಗೆ ಕಾರಿನಲ್ಲಿ ವಿಟ್ಲ-ಕಬಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟುವಿನ ಅರ್ಕೆಜಾಲು ಎಂಬಲ್ಲಿನ ಒಳ ರಸ್ತೆಯಿಂದ ಯತೀಶ್ ಚಲಾಯಿಸುತ್ತಿದ್ದ ಬೈಕ್ ಏಕಾಏಕಿ ಮುಖ್ಯರಸ್ತೆಗೆ ನುಗ್ಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಬೈಕಿಗೆ ಢಿಕ್ಕಿಯಾಗಿದೆ. ಇದರಿಂದ ಬೈಕ್ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ ಮುಂದುವರಿದ ಕಾರು ರಸ್ತೆಯ ಇನ್ನೊಂದು ಬದಿಯಲ್ಲಿ ನಿಲ್ಲಿಸಿದ್ದ ಬೈಕಿಗೂ ಢಿಕ್ಕಿಯಾಗಿದೆ. ಬಳಿಕ ರಸ್ತೆಯ ಬದಿಯ ಮಣ್ಣಿನ ದಿಬ್ಬದ ಮೇಲೆ ಮಗುಚಿಬಿದ್ದಿದೆ.

 

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News