×
Ad

ವಿಟ್ಲ| ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್: ಯತೀಶ್ ಪೆರುವಾಯಿ ವಿರುದ್ಧ ಪ್ರಕರಣ ದಾಖಲು

Update: 2025-06-01 18:29 IST

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಯತೀಶ್ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಪ್ರಚೋದನೆ ಮಾಡುವ 3 ಪೋಸ್ಟ್ ಗಳನ್ನು ಹಾಕಿದ ಆರೋಪದಲ್ಲಿ ಆತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂತಹ ಪೋಸ್ಟ್ ಗಳಿಂದಾಗಿ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ‌ ಯತೀಶ್ ಪೆರುವಾಯಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News