×
Ad

ವಿಟ್ಲ| ಗಣೇಶ ಪೂಜಾರಿ ಗಡೀಪಾರು

ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪ

Update: 2026-01-03 18:23 IST

ವಿಟ್ಲ : ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ನಿವಾಸಿ ಗಣೇಶ ಪೂಜಾರಿ ಎಂಬಾತನನ್ನು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಗಡೀಪಾರು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಒಟ್ಟು ಹದಿನಾರು ಅಪರಾಧ ಪ್ರಕರಣಗಳಲ್ಲಿ ಗಣೇಶ ಪೂಜಾರಿ ಆರೋಪಿಯಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಠಾಣಾ ವ್ಯಾಪ್ತಿಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಠಾಣಾಧಿಕಾರಿಗಳ ವರದಿಯ ಮೇರೆಗೆ ಮಂಗಳೂರು ಉಪವಿಭಾಗೀಯ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತರು ಗಡೀಪಾರು ಆದೇಶ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡುವ ಬಗ್ಗೆ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ. ಸದ್ರಿ ಆದೇಶದಂತೆ ವಿಟ್ಲ ಪೊಲೀಸರು ಆಲೂರು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News