×
Ad

ವಿಟ್ಲ | ಮನೆಯಲ್ಲಿ ಒಂಟಿಯಾಗಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

Update: 2024-11-21 09:54 IST

ವಿಟ್ಲ: ಮನೆಯಲ್ಲಿ ಒಂಟಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ.

ಮೌರಿಸ್ ಡಿಸೋಜ(61) ಮೃತಪಟ್ಟವರು.

ಮೌರಿಸ್ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಇಂದು ಬೆಳಗ್ಗೆ ಕೆಲಸದವರು ಗಮನಿಸಿದಾಗ ಮೌರಿಸ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೌರಿಸ್ ಡಿಸೋಜ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಒಂಟಿಯಾಗಿದ್ದರಿಂದ ಯಾರಿಗೂ ಇದು ತಿಳಿದುಬಂದಿಲ್ಲ.

ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News