×
Ad

ವಿಟ್ಲ| ಕಂಬಳಬೆಟ್ಟು ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

Update: 2026-03-06 21:16 IST

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಅಲ್ಲದೆ ಕಳೆದ ಸುಮಾರು ವರ್ಷಗಳ ಹಿಂದೆ ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ  ಘಟನೆ ಬೆಚ್ಚಿ ಬೀಳಿಸಿತ್ತು.

ಇದೀಗ ಮತ್ತೆ ಅದೇ ಪರಿಸರದಲ್ಲಿ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಸಿಕೊಂಡಿದ್ದು, ಜನರು ಭಯ ಭೀತರಾಗಿದ್ದಾರೆ. ಸ್ಫೋಟಗೊಂಡು ವಾತಾವರಣದ ತುಂಬಾ ಬಾನೆತ್ತರದಲ್ಲಿ ಹೊಗೆ ಆವರಿಸಿದೆ. ಕಂಬಳಬೆಟ್ಟು ನಿವಾಸಿ ಗಫೂರ್ ಎಂಬವರು ದೇವಸ್ಥಾನದ ಜಾತ್ರೋತ್ಸವಕ್ಕೆ ಪಟಾಕಿ ತಯಾರಿಸಿ, ಶೇಖರಣೆ ಮಾಡಿದ್ದರು. ಮಧ್ಯಾಹ್ನದ ವೇಳೆಗೆ ಬಿಸಿಲಿಗೆ ಇದ್ದಕ್ಕಿಂದಂತೆ ಪಟಾಕಿ ಸ್ಫೋಟಗೊಂಡಿದೆ. ಸ್ಥಳದಲ್ಲಿ ಕಾರ್ಮಿಕರು ಹಾಗೂ ಜನರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 2017ರಲ್ಲಿ ಗಫೂರ್ ಎಂಬವರ ಮನೆ ಸಮೀಪ ಪಟಾಕಿ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇನ್ನೂ ಪ್ರಕರಣ ಇತ್ಯಾರ್ಥಗೊಂಡಿಲ್ಲ. ಇದೀಗ ಅದರ ಸಮೀಪವೇ ಮತ್ತೊಂದು ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ , ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ , ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಪಟಾಕಿ ತಯಾರಿಸಲು ಯಾವುದೇ ಅನುಮತಿ ಪಡೆದಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News