×
Ad

ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರಿಗೆ ಸನ್ಮಾನ

Update: 2026-01-21 14:38 IST

ವಿಟ್ಲ: ಐಕ್ಯ ವೇದಿಕೆ (ರಿ), ಕೊಡಾಜೆ ಇದರ ನೂತನ ಕಚೇರಿಗೆ ಭೇಟಿ ನೀಡಿದ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರನ್ನು ಐಕ್ಯ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕಳೆದ ಎರಡು ವರ್ಷಗಳಿಂದ ವಿವಿಧ ಕಾರ್ಯಕ್ರಮಗಳು ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಐಕ್ಯ ವೇದಿಕೆಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನೆಟ್ಲಮುಡ್ನೂರು, ಮಾಣಿ ಹಾಗೂ ಅನಂತಾಡಿ ಗ್ರಾಮಗಳಿಗೆ ಸೀಮಿತವಾಗಿರುವ ಸಂಸ್ಥೆಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸುವಂತೆ ಸಲಹೆ ನೀಡಿದರು.

ವಿಟ್ಲ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ, ಈ ಭಾಗದ ಎಲ್ಲ ವರ್ಗದ ಜನರ ಪ್ರೀತಿ ಮತ್ತು ವಿಶ್ವಾಸ ಗಳಿಸಿದ್ದ ಪ್ರಕಾಶ್ ದೇವಾಡಿಗ ಅವರು ‘ಜನಸ್ನೇಹಿ ಪೊಲೀಸ್’ ಎಂಬ ಪದಕ್ಕೆ ಅರ್ಥ ತುಂಬಿದ್ದಾರೆ. ಮುಂಬಡ್ತಿ ಪಡೆದು ಪುನಃ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡು ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದು ಅಭಿನಂದನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಐಕ್ಯ ವೇದಿಕೆಯ ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಹೇಳಿದರು.

ಈ ಸಂದರ್ಭದಲ್ಲಿ ಐಕ್ಯ ವೇದಿಕೆಯ ಅಧ್ಯಕ್ಷ ಅಶ್ರಫ್ ಭಾರತ್, ಕೋಶಾಧಿಕಾರಿ ರಫೀಕ್ ಎಸ್.ಎಸ್., ಕಾರ್ಯದರ್ಶಿ ಆಬಿದ್ ನೇರಳಕಟ್ಟೆ, ಸದಸ್ಯರಾದ ಅಬೂಬಕ್ಕರ್ (ಅಬ್ಬು), ಮಜೀದ್ ಅನಂತಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News