ವಿಟ್ಲ| ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2025-07-13 20:38 IST
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.
ಬಿಹಾರದ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. ಈತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು, ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ, ಸ್ಥಳೀಯ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2015ರಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.