×
Ad

ವಿಟ್ಲ ಪರ್ತಿಪ್ಪಾಡಿ | ಕಾರು ಢಿಕ್ಕಿ: ರಸ್ತೆ ಬದಿ ನಿಂತಿದ್ದ ವ್ಯಕ್ತಿ ಗಂಭೀರ

Update: 2025-08-08 11:54 IST

ವಿಟ್ಲ: ಅತೀ ವೇಗದಲ್ಲಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ.

ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ಬೇಕರಿಯ ಮಾಲಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು.

ಜಗನ್ನಾಥ ಶೆಟ್ಟಿಗಾರ್ ಇಂದು ಬೆಳಗ್ಗೆ ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೇ ಪಕ್ಕದಲ್ಲಿ ನಿಂತಿದ್ದ ವೇಳೆ ವಿಟ್ಲ ಕಡೆಯಿಂದ ಸಾಲೆತ್ತೂರಿನತ್ತ ತೆರಳುತ್ತಿದ್ದ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಜಗನ್ನಾಥ ಶೆಟ್ಟಿಗಾರ್ ಅವರನ್ನು ಕೂಡಲೇ ಸ್ಥಳೀಯರು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News