×
Ad

ಸೋಮೇಶ್ವರದ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ: ಫಾರೂಕ್ ಉಳ್ಳಾಲ್

Update: 2023-12-25 13:34 IST

Photo: twitter

ಉಳ್ಳಾಲ: ಸೋಮೇಶ್ವರ ಪಂಚಾಯತಿನಲ್ಲಿ ಬಿಜೆಪಿ ಆಡಳಿತವಿದ್ದಾಗ ಜನಪರ ಕೆಲಸಗಳಿಗಿಂತ ಭ್ರಷ್ಟಾಚಾರಕ್ಕೆ ಆದ್ಯತೆ ಕೊಡಲಾಗುತ್ತಿತ್ತು. ಬಿಜೆಪಿಯ ಆಡಳಿತ ವೈಫಲ್ಯದಿಂದ ನೊಂದ ಮತದಾರರು ಈ ಬಾರಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಫಾರೂಕ್ ಉಳ್ಳಾಲ್ ಹೇಳಿದ್ದಾರೆ.

ಶಾಸಕ ಯುಟಿ ಖಾದರ್ ಅವರ ಜನಪರ ಕಾಳಜಿ, ಅಭಿವೃದ್ಧಿ ಕಾರ್ಯಗಳು ಹಾಗೂ ದೂರದೃಷ್ಠಿಯ ಯೋಜನೆಗಳು ಸೋಮೇಶ್ವರದ ಮತದಾರರ ಪ್ರಶಂಸೆಗೆ ಪಾತ್ರವಾಗಿವೆ.

ಸೋಮೇಶ್ವರ ಗ್ರಾಮ ವ್ಯಾಪ್ತಿಯಲ್ಲಿ ಕಂಡು ಬರುವ ಬಹುತೇಕ ರಸ್ತೆ, ಚರಂಡಿಗಳ ಕಾಮಗಾರಿ,ಕುಡಿಯುವ ನೀರಿನ ಪೂರೈಕೆ ಮುಂತಾದ ಅಭಿವೃದ್ಧಿ ಕೆಲಸಗಳೆಲ್ಲವೂ ಶಾಸಕ ಯು.ಟಿ.ಖಾದರ್ ಅವರ ಕೊಡುಗೆಯಾಗಿವೆ. ಸೋಮೇಶ್ವರ ಗ್ರಾಮದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅತ್ಯಧಿಕ ಸಂಖ್ಯೆಯಲ್ಲಿ ಚುನಾಯಿಸುವ ಸಾಧ್ಯತೆ ಗ್ರಾಮದಾದ್ಯಂತ ಕಂಡುಬರುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News