ವಾಮಂಜೂರು: ಸಿಡಿಲು ಬಡಿದು ಮನೆಗೆ ಹಾನಿ
Update: 2023-10-16 23:02 IST
ಮಂಗಳೂರು, ಅ.16: ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ಸೋಮವಾರ ನಡೆದಿದೆ.
ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.
ಶಾರ್ಟ್ ಸರ್ಕ್ಯುಟ್‌ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂದರ್ಭ ಮನೆಯಲ್ಲಿ ನಾಲ್ಕು ಮಂದಿ ಇದ್ದರು ಎನ್ನಲಾಗಿದೆ.