×
Ad

ವಿಟ್ಲ: ಆಟೋ ಚಾಲಕನಿಗೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು

Update: 2023-09-28 23:00 IST

ವಿಟ್ಲ: ಆಟೋ ಚಾಲಕನಿಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ತಂಡಯೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ವಿಟ್ಲ ಕಸಬ ಗ್ರಾಮದ ನಿವಾಸಿ ಮಹಮ್ಮದ್‌ ಸುಹೈಲ್‌ (25) ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಸೆ. 27 ರಂದು ರಾತ್ರಿ ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುವಾಗ ಸುಹೈಲ್ ಹಾಗೂ ಆರೋಪಿ ಹಾರೀಸ್‌ ರವರಿಗೂ ಮಾತುಕತೆಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಇಂದು ಬೆಳಗ್ಗೆ ಸುಹೈಲ್ ತನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ತಲುಪಿದಾಗ ಆರೋಪಿ ಹಾರೀಸ್ ಎಂಬಾತನು ಆತನ ಅಟೋರಿಕ್ಷಾದಲ್ಲಿ ಅಶ್ರಫ್‌ ಉರಿಮಜಲು, ರಿಯಾಝ್‌ ಉರಿಮಜಲು ,ಅಚ್ಚುಕು ಕೊಲ್ಪೆ ರವರೊಂದಿಗೆ ಬಂದು ಸುಹೈಲ್ ಅಟೊ ರಿಕ್ಷಾಕ್ಕೆ ಅಡ್ಡ ಇಟ್ಟು ತಡೆದು ನಿಲ್ಲಿಸಿ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಹಲ್ಲೆಯಿಂದ ಗಾಯಗೊಂಡ ಸುಹೈಲ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News