×
Ad

ಮುಡಾ ಆಯುಕ್ತರ ವಿರುದ್ಧ ಮಹಿಳೆ ದೂರು: ಪ್ರಕರಣ ದಾಖಲು

Update: 2024-01-07 23:09 IST

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತ ಮನ್ಸೂರ್ ಅಲಿ ಅವರ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವುದಾಗಿ ವರದಿಯಾಗಿದ್ದು, ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

ಮುಡಾ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡಿಕೊಂಡಿರುವ ಮಹಿಳೆಯೊಬ್ಬರು ಪೊಲೀಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಮುಡಾ ಆಯುಕ್ತ ಮನ್ಸೂರು ಆಲಿ ತನಗೆ ಲೈಂಗಿಕ, ಮಾನಸಿಕ, ದೈಹಿಕ ಕಿರುಕುಳ ನೀಡಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.

ಅದರಂತೆ ಉರ್ವ ಠಾಣೆಯಲ್ಲಿ ಸೆ.354, 354 ಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ತನಿಖಾ ಹಂತದಲ್ಲಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News