×
Ad

ಉಳ್ಳಾಲ ಬೀಚ್ ನಲ್ಲಿ ಸಮುದ್ರಕ್ಕಿಳಿದ ಮಹಿಳೆ ನೀರಲ್ಲಿ ಮುಳುಗಿ ಮೃತ್ಯು: ಮೂವರ ರಕ್ಷಣೆ

Update: 2024-06-11 11:01 IST

ಸಾಂದರ್ಭಿಕ ಚಿತ್ರ 

ಉಳ್ಳಾಲ, ಜೂ.11: ಇಲ್ಲಿನ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮೃತರನ್ನು ಆಂಧ್ರ ಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್.ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಮೃತಪಟ್ಟವರು.

ಸೋಮವಾರ ಸಂಜೆ ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದ ಪರಿಣಾಮ ನಾಲ್ವರು ಮಹಿಳೆಯರು ಸಮುದ್ರಪಾಲಾಗಿದ್ದರು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News