ತುಂಬೆ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ
Update: 2025-06-06 15:10 IST
ಬಂಟ್ವಾಳ : ತುಂಬೆ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತುಂಬೆ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಮಾತನಾಡಿ,ಪರಿಸರಕ್ಕೆ ನಾವು ಮುಖ್ಯವಲ್ಲ ನಮಗೆ ಪರಿಸರ ಮುಖ್ಯ ಎಂದರು .
ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಜಗದೀಶ್ ರೈ ಬಿ., ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಜ್ಯೋತ್ಸ್ನಾ , ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಮೋಲಿ ಎಡ್ನ ಗೋನ್ಸಾಲ್ವಿಸ್, ಶಿಕ್ಷಕಿಯರಾದ ಸುಕೇತಾ, ಶ್ವೇತಾ, ಕಚೇರಿ ಸಹಾಯಕ ಅಶೋಕ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪರಿಸರ ಗೀತೆ ಹಾಡಿದರು.
ಕನ್ನಡ ಅಧ್ಯಾಪಕ ರಮೇಶ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.