×
Ad

ಆಗುಂಬೆ ಘಾಟ್‍ನಲ್ಲಿ ಯುವಕನ ಕೊಲೆ ಪ್ರಕರಣ: ಆರೋಪಿಗಳ ಬಂಧನ

Update: 2023-12-08 23:25 IST

ಪುತ್ತೂರು:  ಕುಂಬ್ರದಲ್ಲಿನ ಅರ್ತ್ ಮೂವರ್ಸ್ ಸಂಸ್ಥೆಯೊಂದರಲ್ಲಿ ಟಿಪ್ಪರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಯುವಕನ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್‍ನಲ್ಲಿ ಶುಕ್ರವಾರ ಸಂಜೆ ಪೊಲೀಸರು ಪತ್ತೆ ಮಾಡಿದ್ದಾರೆ.

ಬಾಗಲಕೋಟೆ ನಿವಾಸಿ ಹನುಮಂತಪ್ಪ (22) ಕೊಲೆಯಾದ ಯುವಕ.

ಬಾದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ನಿವಾಸಿಗಳಾದ ಶಿವಪ್ಪ ಹನುಮಪ್ಪ ಮಾದರ, ಮಂಜುನಾಥ ಹನು ಮಪ್ಪ ಮಾದರ ಮತ್ತು ದುರ್ಗಪ್ಪ ಮಾದರ ಕೊಲೆ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಹನುಮಂತಪ್ಪನನ್ನು ಕೊಲೆ ಮಾಡಿ ಮೃತದೇಹವನ್ನು ಆಗುಂಬೆ ಘಾಟಿಯಲ್ಲಿ ಎಸೆದಿರುವ ಬಗ್ಗೆ ಪೊಲೀಸ್ ತನಿಖೆ ವೇಳೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಮೃತದೇಹದ ಅಸ್ತಿಪಂಜರ ಪತ್ತೆಯಾಗಿದೆ. ನ.17ರಂದು ಸಂಜೆ ಹನುಮಂತಪ್ಪರನ್ನು ಅಪಹರಿಸಿ ಕೊಲೆ ಮಾಡಿರುವುದಾಗಿ ಪೊಲೀಸ್ ವಿಚಾರಣೆಯಿಂದ ತಿಳಿದು ಬಂದಿದೆ.

ಘಟನೆಯ ಕುರಿತು ಮೃತನ ತಾಯಿ ನೀಡಿದ್ದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News