×
Ad

ದಿಲ್ಲಿ, ನೋಯ್ಡಾದಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ

Update: 2023-07-26 11:01 IST

ಹೊಸದಿಲ್ಲಿ: ದಿಲ್ಲಿಯಲ್ಲಿ ಇಂದು ಬೆಳಗ್ಗೆ ಸಾಧಾರಣದಿಂದ ಭಾರೀ ಮಳೆಯಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ಜಲಾವೃತವಾಗಿದೆ. ರಸ್ತೆಗಳಲ್ಲಿ ಗೋಚರತೆ ಇಲ್ಲದ ಕಾರಣ ವಾಹನ ಸಂಚಾರಕ್ಕೂ ತೊಂದರೆಯಾಗಿದೆ.

 ದಿಲ್ಲಿ ಜೊತೆಗೆ ನೋಯ್ಡಾ ಹಾಗೂ  ಗಾಝಿಯಾಬಾದ್‌ನ ಕೆಲವು ಭಾಗಗಳಲ್ಲಿ ಬುಧವಾರ ಮುಂಜಾನೆ ಮಳೆಯಾಗಿದೆ. ಗುಡುಗು ಸಹಿತ ಭಾರೀ ಮಳೆಯ ನಂತರ, ನೋಯ್ಡಾದ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

ದಿಲ್ಲಿ ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ನಿನ್ನೆಯೂ ಸಾಧಾರಣ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಹಿಂಡನ್ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಗ್ರೇಟರ್ ನೋಯ್ಡಾದಲ್ಲಿ ಹಲವಾರು ಮನೆಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.

ದಿಲ್ಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ಮಂಗಳವಾರ ಬೆಳಗ್ಗೆ 7 ಗಂಟೆಗೆ 205.45 ಮೀಟರ್‌ಗಳಷ್ಟು ನೀರಿನ ಮಟ್ಟ ದಾಖಲಾಗಿದೆ. ಯಮುನಾ ನದಿಯ ಅಪಾಯದ ಗುರುತು 205.33 ಮೀಟರ್‌ನಲ್ಲಿದೆ. ಸೋಮವಾರ ಯಮುನಾದಲ್ಲಿ ನೀರಿನ ಮಟ್ಟ 206.56 ಮೀಟರ್ ಇತ್ತು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News