×
Ad

ವಡೋದರಾ ವಿಮಾನ ನಿಲ್ದಾಣದಲ್ಲಿ ಕೊಹ್ಲಿಯನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು: ವೀಡಿಯೊ ವೈರಲ್

Update: 2026-01-08 13:46 IST

Photo credit: PTI

ವಡೋದರಾ: ನ್ಯೂಝಿಲೆಂಡ್ ವಿರುದ್ಧದ ಮುಂಬರುವ ಸರಣಿಯ ಮೊದಲ ಏಕದಿನ ಪಂದ್ಯಕ್ಕಾಗಿ ವಡೋದರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಸುತ್ತುವರಿದಿದ್ದಾರೆ. ಇದರಿಂದ ಕಾರಿನತ್ತ ತೆರಳಲು ಕೊಹ್ಲಿ ಪರದಾಡಿದ್ದು.

ಈ ಕುರಿತ ವೀಡಿಯೊ ವೈರಲ್ ಆಗಿದೆ.

ಕೊಹ್ಲಿಯನ್ನು ಸ್ವಾಗತಿಸಲು ವಡೋದರಾ ವಿಮಾನ ನಿಲ್ದಾಣದ ಹೊರಗೆ ಅಭಿಮಾನಿಗಳು ಜಮಾಯಿಸಿದ್ದರು. ಕೊಹ್ಲಿ ವಿಮಾನ ನಿಲ್ದಾಣದ ಹೊರಗೆ ಬರುತ್ತಿದ್ದಂತೆ ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ನೋಡಲು ಮತ್ತು ಪೋಟೊ ಕ್ಲಿಕ್ಕಿಸಲು ಅಭಿಮಾನಿಗಳು ಮುಂದಾದರು. ಇದರಿಂದ ಕೊಹ್ಲಿಗೆ ಕಾರಿನತ್ತ ಸಾಗುವುದು ಕಷ್ಟವಾಯಿತು. ಕೊಹ್ಲಿ ಜನಸಂದಣಿಯನ್ನು ದಾಟಿ ಮುಂದೆ ಹೋಗಲು ಪರದಾಡುತ್ತಿದ್ದಂತೆ ಅಭಿಮಾನಿಗಳು ಘೋಷಣೆ ಕೂಗಿದರು.

ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನ ನಿಲ್ದಾಣದಲ್ಲಿ ಜಮಾಯಿಸಿರುವುದರಿಂದ ಭದ್ರತಾ ಸಿಬ್ಬಂದಿಗೂ ಪರಿಸ್ಥಿತಿಯನ್ನು ನಿಭಾಯಿಸುವುದು ಸವಾಲಾಗಿತ್ತು. ಈ ಕುರಿತ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಭಾರತ ಹಾಗೂ ನ್ಯೂಝಿಲೆಂಡ್‌ ನಡುವಿನ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯ ಜನವರಿ 11ರಂದು ವಡೋದರದಲ್ಲಿ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News