×
Ad

2025ರ ಜನವರಿಯಿಂದ 1,080 ಭಾರತೀಯರನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ: ವಿದೇಶಾಂಗ ಸಚಿವಾಲಯ ಮಾಹಿತಿ

Update: 2025-05-30 12:17 IST

File Photo: PTI

ಹೊಸದಿಲ್ಲಿ: 2025ರ ಜನವರಿಯಿಂದ ಸುಮಾರು 1,080 ಭಾರತೀಯರನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ. ಇದರಲ್ಲಿ ಸರಿಸುಮಾರು 62% ಜನರು ವಾಣಿಜ್ಯ ವಿಮಾನಗಳಲ್ಲಿ ಭಾರತಕ್ಕೆ ಮರಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ವಲಸೆ ವಿಚಾರಗಳ ಬಗ್ಗೆ ಭಾರತ ಅಮೆರಿಕ ಜೊತೆ ನಿಕಟ ಸಂಪರ್ಕದಲ್ಲಿದೆ. ಅಕ್ರಮ ವಲಸಿಗರ ಬಗ್ಗೆ ವಿವರಗಳನ್ನು ಪಡೆದ ನಂತರ ನಾವು ಅವರನ್ನು ವಾಪಾಸ್ಸು ಕರೆಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

2025ರ ಜನವರಿಯಿಂದ ಸುಮಾರು 1,080 ಭಾರತೀಯರು ಅಮೆರಿಕದಿಂದ ತಾಯ್ನಾಡಿಗೆ ಮರಳಿದ್ದಾರೆ ಅಥವಾ ಗಡೀಪಾರಾಗಿದ್ದಾರೆ. ಇವರಲ್ಲಿ 62% ಜನರು ವಾಣಿಜ್ಯ ವಿಮಾನಗಳಲ್ಲಿ ಭಾರತಕ್ಕೆ ಬಂದಿದ್ದಾರೆ ಎಂದು ಹೇಳಿದರು.

ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ನಿರ್ಬಂಧ ಮತ್ತು ಯುಎಸ್‌ ನ್ಯಾಯಾಲಯದ ತಡೆ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ರಣಧೀರ್ ಜೈಸ್ವಾಲ್, ಭಾರತ ಸರಕಾರಕ್ಕೆ ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಕಲ್ಯಾಣವು ಅತ್ಯಂತ ಆದ್ಯತೆಯ ವಿಷಯವಾಗಿದೆ. ಈ ಕುರಿತ ಬೆಳವಣಿಗೆಯನ್ನು ಗಮನಿಸುತ್ತಿರುವುದಾಗಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News