×
Ad

ಟ್ರಕ್- ಬಸ್ ಡಿಕ್ಕಿಯಾಗಿ ಬೆಂಕಿ ಅನಾಹುತ: 12 ಮಂದಿ ಸಜೀವ ದಹನ

Update: 2023-12-28 08:32 IST

ಗುಣಾ (ಮಧ್ಯಪ್ರದೇಶ) ಮಧ್ಯಪ್ರದೇಶದ ಗುಣಾ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಡಂಪರ್ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಸಂದರ್ಭದಲ್ಲಿ, ಬಸ್ಸಿಗೆ ಬೆಂಕಿ ಹತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ 12 ಮಂದಿ ಸಜೀವ ದಹನವಾಗಿದ್ದಾರೆ. ದುರಂತದಲ್ಲಿ ಇತರ 14 ಮಂದಿಗೆ ತೀವ್ರ ಸ್ವರೂಪದ ಸುಟ್ಟಗಾಯಗಳಾಗಿವೆ.

ಗುಣಾ- ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಡಂಪರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಗಾಯಾಳುಗಳನ್ನು ಗುಣಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, ಇತರ 14 ಮಂದಿಗೆ ಸುಟ್ಟಗಾಯಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ರಾತ್ರಿ 9ರ ಸುಮಾರಿಗೆ ಬಸ್ ಆರೋನ್ ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಡಂಪರ್ ಜತೆ ಮುಖಾಮುಖಿ ಡಿಕ್ಕಿ ಹೊಡೆಯಿತು. ಬಸ್ಸಿನಲ್ಲಿ ಸುಮಾರು 30 ಮಂದಿ ಇದ್ದರು. ಬಸ್ಸಿಗೆ ಬೆಂಕಿ ಹತ್ತಿಕೊಂಡಾಗ ನಾಲ್ಕು ಮಂದಿ ತಪ್ಪಿಸಿಕೊಳ್ಳಲು ಯಶಸ್ವಿಯಾದರು. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತರುಣ್ ರಾಠಿ ಹೇಳಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News