×
Ad

ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್‌ ದಾಳಿಗೆ 13 ನಾಗರಿಕರು ಮೃತ್ಯು, 59 ಮಂದಿಗೆ ಗಾಯ: ಮಾಹಿತಿ ನೀಡಿದ ಸಚಿವಾಲಯ

Update: 2025-05-08 12:33 IST

Photo credit: PTI

ಹೊಸದಿಲ್ಲಿ: ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಗೆ ಪೂಂಚ್‌ನಲ್ಲಿ 13 ನಾಗರಿಕರು ಮೃತಪಟ್ಟಿದ್ದಾರೆ ಮತ್ತು 59 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮೇ 7 ರಂದು ಭಾರತದ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ ಒಟ್ಟು ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು 'ಆಪರೇಷನ್ ಸಿಂದೂರʼ ಕಾರ್ಯಚರಣೆ ನಡೆಸಿತು. ಇದಕ್ಕೆ ಪ್ರತೀಕಾರವಾಗಿ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಶೆಲ್ ದಾಳಿ ನಡೆಸಿದೆ.

ಜಮ್ಮುಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಸತತ 14 ನೇ ದಿನವೂ ಕದನ ವಿರಾಮವನ್ನು ಉಲ್ಲಂಘಿಸಿದೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ನಡೆಸಿದ ತೀವ್ರವಾದ ಫಿರಂಗಿ ಮತ್ತು ಶೆಲ್ ದಾಳಿಯಲ್ಲಿ ನಾಲ್ವರು ಮಕ್ಕಳು, ಓರ್ವ ಸೈನಿಕ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ ಎಂದು NDTV ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News