×
Ad

ಬಿಭವ್ ಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ

Update: 2024-05-31 22:30 IST

ಬಿಭವ್ ಕುಮಾರ್ |  PC : ANI 

ಹೊಸದಿಲ್ಲಿ : ಆಪ್ ನ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣದ ಆರೋಪಿಯಾಗಿರುವ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರಿಗೆ ಇಲ್ಲಿನ ನ್ಯಾಯಾಲಯ ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಮೇ 13ರಂದು ದಿಲ್ಲಿ ಮುಖ್ಯಮಂತ್ರಿ ಅವರ ನಿವಾಸದಲ್ಲಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೂರು ದಿನಗಳ ಪೊಲೀಸ್ ಕಸ್ಟಡಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬಿಭವ್ ಕುಮಾರ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಅಲ್ಲದೆ, ಬಿಭವ್ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು. ಇದಕ್ಕೆ ಮೆಟ್ರೋಪಾಲಿಟಿನ್ ದಂಡಾಧಿಕಾರಿ ಗೌರವ್ ಗೋಯಲ್ ಅನುಮತಿ ನೀಡಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News