×
Ad

142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಪ್ರಾಂಶುಪಾಲನ ಬಂಧನ

Update: 2023-11-23 18:07 IST

ಸಾಂದರ್ಭಿಕ ಚಿತ್ರ

ಚಂಢೀಗಡ: ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ 142 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಆರಂಭದಲ್ಲಿ 60 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು, ಆದರೆ ಈಗ ಅವರ ಸಂಖ್ಯೆ 142 ಕ್ಕೆ ಏರಿದೆ.

ಲೈಂಗಿಕ ಕಿರುಕುಳ ತಡೆ ಸಮಿತಿ ನಡೆಸಿದ ತನಿಖೆಯಲ್ಲಿ ಈ ವಿಷಯ ಬಹಿರಂಗವಾಗಿದೆ.

55 ವರ್ಷದ ಆರೋಪಿ ತಮ್ಮನ್ನು ಅವರ ಕಚೇರಿಗೆ ಕರೆದು ಅಶ್ಲೀಲ ಕೃತ್ಯಗಳಲ್ಲಿ ತೊಡಗಿದ್ದರು ಎಂದು ಸಂತ್ರಸ್ತೆಯರು ಆರೋಪಿಸಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ.

ಹರಿಯಾಣ ಪೊಲೀಸರು ನವೆಂಬರ್ 6 ರಂದು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ.

ಜಿಂದ್ ಜಿಲ್ಲಾಧಿಕಾರಿ ಪ್ರಕರಣವನ್ನು ಖಚಿತಪಡಿಸಿದ್ದಾರೆ. ಈ ಕುರಿತು ವಿವಿಧ ಇಲಾಖೆಗಳಿಂದ ತನಿಖೆ ನಡೆಯುತ್ತಿದೆ.

ಶಾಲೆಯ ಕೆಲವು ವಿದ್ಯಾರ್ಥಿನಿಯರಿಂದ ಪ್ರಾಥಮಿಕ ದೂರನ್ನು ಹರಿಯಾಣ ರಾಜ್ಯ ಮಹಿಳಾ ಆಯೋಗವು ಸೆಪ್ಟೆಂಬರ್ 14 ರಂದು ಪೊಲೀಸರಿಗೆ ರವಾನಿಸಿತ್ತಾದರೂ, ಅಕ್ಟೋಬರ್ 30 ರಂದು ಆರೋಪಿ ಪ್ರಾಂಶುಪಾಲನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ನಂತರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು.

ಶಿಕ್ಷಣ ಇಲಾಖೆ ಆರೋಪಿಯನ್ನು ಅಕ್ಟೋಬರ್ 27 ರಂದು ಅಮಾನತುಗೊಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News