×
Ad

ಧೋನಿ ವಿರುದ್ಧ ಮಾನಹಾನಿಕರ ಹೇಳಿಕೆ ಪ್ರಕರಣ ನೀಡಿದ್ದ ನಿವೃತ್ತ ಅಧಿಕಾರಿಗೆ 15 ದಿನ ಜೈಲು: ಮದ್ರಾಸ್ ಹೈಕೋರ್ಟ್ ತೀರ್ಪು

Update: 2023-12-15 22:10 IST


ಎಂ.ಎಸ್.ಧೋನಿ  | Photo: X 

 



ಚೆನ್ನೈ: ಕ್ರಿಕೆಟಿಗ ಎಂ.ಎಸ್.ಧೋನಿ ಅವರು ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ತೀರ್ಪು ನೀಡಿರುವ ಮದ್ರಾಸ್ ಹೈಕೋರ್ಟ್ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಹಾಗೂ ಮ್ಯಾಚ್‌ ಫಿಕ್ಸಿಂಗ್ ಜಾಲವನ್ನು ಬಯಲಿಗೆಳೆದಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್ ಅವರಿಗೆ 15 ದಿನಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಆದರೆ, ತನ್ನ ತೀರ್ಪನ್ನು ಪ್ರಶ್ನಿಸಲು ಅವಕಾಶ ಮಾಡಿಕೊಡುವುದಕ್ಕಾಗಿ ಸಂಪತ್ ಕುಮಾರ್ ಅವರ ಶಿಕ್ಷೆಯನ್ನು 30 ದಿನಗಳವರೆಗೆ ನ್ಯಾಯಮೂರ್ತಿಗಳಾದ ಎಸ್.ಎಸ್.ಸುಂದರ್ ಹಾಗೂ ಸುಂದರ್ ಮೋಹನ್ ಅವರನ್ನೊಳಗೊಂಡ ನ್ಯಾಯಪೀಠವು ಅಮಾನತಿನಲ್ಲಿರಿಸಿದೆ.

ನಿವೃತ್ತ ಪೊಲೀಸ್ ಮಹಾನಿರೀಕ್ಷಕರಾಗಿದ್ದು, ಇತ್ತೀಚೆಗೆ ನಿವೃತ್ತರಾದ ಜಿ.ಸಂಪತ್ ಕುಮಾರ್ ಅವರು ಸಂದರ್ಶನವೊಂದರಲ್ಲಿ ಮ್ಯಾಚ್‌ ಫಿಕ್ಸಿಂಗ್ ಹಗರಣದ ಜೊತೆ ತನಗೆ ನಂಟು ಕಲ್ಪಿಸಿದ್ದಕ್ಕಾಗಿ ಅವರ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸುಪ್ರೀಂಕೋರ್ಟ್ ಹಾಗೂ ಮದ್ರಾಸ್ ಹೈಕೋರ್ಟ್ ವಿರುದ್ಧ ವಿವಾದಾತ್ಮಕ ಹಾಗೂ ಘಾಸಿಗೊಳಿಸುವಂತಹ ಹೇಳಿಕೆ ನೀಡಿರುವುದನ್ನು ಮಾನನಷ್ಟ ಮೊಕದ್ದಮೆಯಲ್ಲಿ ಉಲ್ಲೇಖಿಸಲಾಗಿತ್ತು.

ಬಳಿಕ ಮ್ಯಾಚ್‌ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿ ಸಂಪತ್ ಕುಮಾರ್ ಅವರು ತನಿಖೆ ನಡೆಸುವ ರೀತಿ ಬಗ್ಗೆ ನಿರ್ದಿಷ್ಟ ಆರೋಪಗಳನ್ನು ಹೊರಿಸಲಾದ ಬಳಿಕ ಅವರನ್ನು ಸೇವೆ ಯಿಂದ ಅಮಾನತುಗೊಳಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News