ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭೂಕುಸಿತ : ಮೃತರ ಸಂಖ್ಯೆ 17ಕ್ಕೆ ಏರಿಕೆ, ಪ್ರಮುಖ ರಸ್ತೆ ಸಂಪರ್ಕ ಕಡಿತ
Photo credit: PTI
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.
ಉತ್ತರ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಇದರಿಂದಾಗಿ ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಭೂ ಕುಸಿತದಿಂದ ಬಂಗಾಳ ಮತ್ತು ಸಿಕ್ಕಿಂ ಸಂಪರ್ಕ ರಸ್ತೆ, ಡಾರ್ಜಿಲಿಂಗ್ ಮತ್ತು ಸಿಲಿಗುರಿ ಸಂಪರ್ಕ ರಸ್ತೆಗೆ ಹಾನಿಯಾಗಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ʼಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ಪ್ರಾಣ ಹಾನಿ ತೀವ್ರವಾಗಿ ನೋವುಂಟು ಮಾಡಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ಸರಾಕರ ಬದ್ಧವಾಗಿದೆʼ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಡಾರ್ಜಿಲಿಂಗ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.