×
Ad

Odisha| ಕಲ್ಲು ಕ್ವಾರಿಯಲ್ಲಿ ಸ್ಪೋಟ: ಕನಿಷ್ಠ ಇಬ್ಬರು ಕಾರ್ಮಿಕರು ಮೃತ್ಯು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

Update: 2026-01-04 12:11 IST

Photo credit: indiatoday.in

ಭುವನೇಶ್ವರ: ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಅಕ್ರಮ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಪಾಲ್‌ಪುರ ಗ್ರಾಮದ ಬಳಿ ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಇದು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

"ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಲಾಗಿದೆ. ಗಾಯಗೊಂಡ ಹಲವಾರು ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News