×
Ad

ಜಾರ್ಖಂಡ್ | ನಕ್ಸಲರ ಜೊತೆ ಗುಂಡಿನ ಚಕಮಕಿ : ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು

Update: 2025-09-04 10:16 IST

ಸಾಂದರ್ಭಿಕ ಚಿತ್ರ (PTI)

ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ನಕ್ಸಲರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಇನ್ನೋರ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಿಷೇಧಿತ ತೃತೀಯಾ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್‌ಪಿಸಿ)ಗೆ ಸೇರಿದ ನಕ್ಸಲರ ನಡುವೆ ತಡರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೋರ್ವರು ಗಾಯಗೊಂಡಿದ್ದು ಅವರನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಲಮು ಡಿಐಜಿ ನೌಶಾದ್ ಆಲಂ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News