ರಶ್ಯ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 26 ಮಂದಿ ಭಾರತೀಯರು ಮೃತ: ರಾಜ್ಯಸಭೆಗೆ ತಿಳಿಸಿದ ಕೇಂದ್ರ ಸರಕಾರ
Photo Credit : PTI
ಹೊಸದಿಲ್ಲಿ: ರಶ್ಯ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 26 ಮಂದಿ ಭಾರತೀಯರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಗುರುವಾರ ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, 50 ಮಂದಿ ಭಾರತೀಯರನ್ನು ರಶ್ಯ ಸಶಸ್ತ್ರ ಪಡೆಗಳಿಂದ ಬಿಡುಗಡೆಗೊಳಿಸುವ ಪ್ರಯತ್ನಗಳು ಜಾರಿಯಲ್ಲಿವೆ ಎಂದೂ ಹೇಳಿದ್ದಾರೆ.
“ವಿದೇಶಾಂಗ ವ್ಯವಹಾರಗಳ ಸಚಿವಾಲಯವು 10 ಮಂದಿ ಭಾರತೀಯರ ಪಾರ್ಥಿವ ಶರೀರಗಳನ್ನು ಭಾರತಕ್ಕೆ ತರಲು ಹಾಗೂ ಇಬ್ಬರು ಭಾರತೀಯ ಪ್ರಜೆಗಳ ಅಂತ್ಯಕ್ರಿಯೆಯನ್ನು ಸ್ಥಳೀಯವಾಗಿ ನೆರವೇರಿಸಲು ನೆರವು ಒದಗಿಸಿದೆ” ಎಂದು ಅವರು ತಿಳಿಸಿದ್ದಾರೆ.
“ಮೃತಪಟ್ಟಿರುವ ಅಥವಾ ನಾಪತ್ತೆಯಾಗಿರುವ 18 ಭಾರತೀಯರ ಕುಟುಂಬದ ಸದಸ್ಯರ ಡಿಎನ್ಎ ಮಾದರಿಗಳನ್ನು ರಶ್ಯ ಪ್ರಾಧಿಕಾರಗಳೊಂದಿಗೆ ಹಂಚಿಕೊಳ್ಳಲಾಗಿದ್ದು, ಮೃತಪಟ್ಟಿರುವ ಭಾರತೀಯ ಪ್ರಜೆಗಳನ್ನು ಪತ್ತೆ ಹಚ್ಚುವ ಪ್ರಯತ್ನಕ್ಕೆ ನೆರವು ಒದಗಿಸಲಾಗಿದೆ” ಎಂದೂ ಅವರು ಹೇಳಿದ್ದಾರೆ.