×
Ad

ಮಧ್ಯಪ್ರದೇಶ | ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವುದನ್ನು ಸೆರೆ ಹಿಡಿದ ಮೂವರು ಎಬಿವಿಪಿ ಸದಸ್ಯರ ಬಂಧನ

Update: 2025-10-19 17:58 IST

Photo: NDTV

ಭೋಪಾಲ್: ಮಧ್ಯಪ್ರದೇಶದಲ್ಲಿ ಆಯೋಜನೆಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವುದನ್ನು ಗುಪ್ತವಾಗಿ ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ಸರಕಾರಿ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

20-22 ವರ್ಷದ ನಡುವಿನ ಈ ಮೂವರು ವಿದ್ಯಾರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್)ದ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ (ABVP) ಸದಸ್ಯರು ಎನ್ನಲಾಗಿದೆ ಎಂದು NDTV ವರದಿ ಮಾಡಿದೆ.

ಮಂಗಳವಾರ ಮಂಡಸೂರ್ ಜಿಲ್ಲೆಯಲ್ಲಿನ ಭಾನ್ಪುರ ಸರಕಾರಿ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ಯುವೋತ್ಸವ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿನಿಯರು ವಸ್ತ್ರಗಳನ್ನು ಬದಲಾಯಿಸುವ ಕೋಣೆಯೊಳಗೆ ನಾಲ್ವರು ಇಣುಕಿ, ಅವರ ಫೋಟೊಗಳು ಹಾಗೂ ವಿಡಿಯೊಗಳನ್ನು ಸೆರೆ ಹಿಡಿಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ವಿದ್ಯಾರ್ಥಿನಿಯರಿದ್ದ ಕೋಣೆಯ ಬಳಿ ಸಂಶಯಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಕಂಡ ಪ್ರಭಾರ ಪ್ರಾಂಶುಪಾಲರು, ಈ ಕುರಿತು ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಆರೋಪಿಗಳನ್ನು ಉಮೇಶ್ ಜೋಶಿ, ಅಜಯ್ ಗೌಡ್ ಹಾಗೂ ಹಿಮಾಂಶು ಬೈರಾಗಿ ಎಂದು ಗುರುತಿಸಲಾಗಿದೆ. ಈ ಘಟನೆಯ ನಂತರ, ಸಂಘಟನೆಯ ನಗರ ಕಾರ್ಯದರ್ಶಿಯಾಗಿದ್ದ ಉಮೇಶ್ ಜೋಶಿಯನ್ನು ಹುದ್ದೆಯಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಜಾಗೊಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News